ಉತ್ತರ ಕರ್ನಾಟಕದ ಚರ್ಚೆಗೆ 2 ದಿನ ಮೀಸಲು

0
13
ಹೊರಟ್ಟಿ

ಬೆಳಗಾವಿ: ಗಡಿನಾಡ ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ವಿಧಾನ ಪರಿಷತ್‌ನಲ್ಲಿ ಎರಡು ದಿನ ಮೀಸಲಿಡುವುದಾಗಿ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದರು.
ಡಿಸೆಂಬರ್ ೪ರಿಂದ ೧೫ ರವರೆಗೆ ನಡೆಯುವ ಅಧಿವೇಶನದ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು,
ಮೊದಲ ವಾರದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಂಗಳವಾರ ಮತ್ತು ಬುಧವಾರ ಎರಡು ದಿನ ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಮೀಸಲಿಡಲಾಗುವುದು. ಈ ಭಾಗದ ಹೆಚ್ಚಿನ ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

Previous articleವಿಷಕಾರಿ ಬೀಜ ಸೇವಿಸಿ ಐವರು ಮಕ್ಕಳು ಅಸ್ವಸ್ಥ
Next articleಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಕೂಗು ಕ್ಷೀಣ