ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೊದಲ ಹೆಜ್ಜೆ ಬೂತಿನೆಡೆಗೆ

0
31

ಬೆಂಗಳೂರು: ಮೊದಲ ಹೆಜ್ಜೆ ಬೂತಿನೆಡೆಗೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷ ಶಶಿಧರ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಪ್ರತಿಕ್ರಿಯಿಸಿರುವ ಅವರು ಗುರಿಯು ಒಂದೇ ಗೆಲುವಿನೆಡೆಗೆ, ಕಾರ್ಯಕರ್ತ ನಮ್ಮ ಶಕ್ತಿ, ಮತದಾರ ನಮ್ಮ ಬಂಧು, “ಮತ್ತೆ ಬಿಜೆಪಿ -ಮತ್ತೊಮ್ಮೆಮೋದಿ, ಬೂತ್ ಗೆಲ್ಲಿಸಿ -ದೇಶ ಗೆಲ್ಲಿಸಿ , ಸಂಕಲ್ಪ ನಮ್ಮದು -ಆಶೀರ್ವಾದ ನಿಮ್ಮದು🙏” ಎಂದಿರುವ ಅವರು ಎಲ್ಲರೂ ಒಗ್ಗೂಡಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದರು ರಾಷ್ಟ್ರೀಯ ನಾಯಕರು ಕೂಡ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಇಂದು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ಬೂತ್ ಗೆದ್ದರೇ ರಾಷ್ಟ್ರ ಗೆಲ್ತೇವೆ, ಸಂಘಟನೆಗೆ ನವ ಚೈತನ್ಯ ತುಂಬುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ, ಇಂದು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬೂತ್ ಅಧ್ಯಕ್ಷರಾದ ಶ್ರೀ ಶಶಿಧರ್ ಅವರ ನಿವಾಸಕ್ಕೆ ಭೇಟಿ ನೀಡಿ ದೀಪಾವಳಿಯ ಶುಭ ಕೋರುವುದರೊಂದಿಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸದೃಢಗೊಳಿಸಲು ಸಂಕಲ್ಪ ತೊಡಲಾಯಿತು ಎಂದರು.

Previous articleಸೋಲಾರ್ ವಿಸ್ತರಣೆಗಿಂತ ಜಲ ಶಾಖೋತ್ಪನ್ನಕ್ಕೆ ಆದ್ಯತೆ ಇರಲಿ
Next article40 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ