ಗಲ್ಲಿ ಗಲ್ಲಿಯಲ್ಲಿ Pay CM ಪೋಸ್ಟರ್‌

0
101
Pay CM

ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು‌ ಆರೋಪಿಸುತ್ತಿದ್ದ ಕಾಂಗ್ರೆಸ್‌ ಇಂದು ರಾಜ್ಯ ಸರ್ಕಾರದ ವಿರುದ್ಧ ವಿನೂತನ ಅಸ್ತ್ರವನ್ನು ಪ್ರಯೋಗಿಸಿದೆ. 40% ಸರ್ಕಾರ ಎಂದು ಟೀಕೆ ಮಾಡುತ್ತಿದ್ದ ಕಾಂಗ್ರೆಸ್‌ ಈಗ PayCM ಎಂದು ಪೇಟಿಯಂ ಮಾದರಿಯಲ್ಲಿ ಕ್ಯೂಆರ್‌ ಕೋಡ್‌ ಇರುವ ಪೋಸ್ಟರ್‌ನ್ನು ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿ ಅಂಟಿಸಿ ಗೇಲಿ ಮಾಡಿದೆ.

Pay CM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ “PAY CM” ಶೀರ್ಷಿಕೆಯ ಪೋಸ್ಟರ್‌ಗಳನ್ನು ಎಲ್ಲೆಡೆ ಅಂಟಿಸಲಾಗಿದ್ದು, ಈ ಕ್ಯೂಆರ್ ಕೋಡ್​​ನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಅದು ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ‘40% ಕಮಿಷನ್ ಸರ್ಕಾರ’ ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಸದ್ಯ ಗೋಡೆಗಳ ಅಂಟಿಸಿದ ಪೋಸ್ಟರ್‌ಗಳು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿವೆ.

Previous articleಹಾಸ್ಯ ಕಲಾವಿದ ರಾಜು ಶ್ರೀವಾಸ್ತವ ನಿಧನ
Next articleಕ್ಯೂಆರ್‌ ಕೋಡ್‌ನಲ್ಲಿ ರಾಹುಲ್‌‌ ಗಾಂಧಿ ಫೋಟೋ ಹಾಕಿ ಭಿಕ್ಷೆ ಬೇಡಬಹುದಲ್ಲವೇ?: ಬಿಜೆಪಿ