ಎಲ್ಲದಕ್ಕೂ ಕಾಂಗ್ರೆಸ್‌ ಕಾರಣವೇ?

0
13

ವಿಜಯಪುರ: ೨೦೨೧ರಲ್ಲಿ ಜಾತಿ ಗಣತಿಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಜಯಪ್ರಕಾಶ ಹೆಗ್ಡೆ ಹೇಳಿದ್ದಾರೆ. ೨೦೨೧ರಲ್ಲಿ ಯಾರು ಅಧಿಕಾರದಲ್ಲಿದ್ದರು ಬಿಜೆಪಿ ಅಧಿಕಾರದಲ್ಲಿದ್ದಾಗ ನಾಪತ್ತೆಯಾದರೆ ಕಾಂಗ್ರೆಸ್‌ನವರು ಹೇಗೆ ಕಾರಣವಾಗುತ್ತಾರೆ. ಎಲ್ಲದಕ್ಕೂ ಕಾಂಗ್ರೆಸ್ ಕಾರಣವೇ? ಎಂದು ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿಯ ಮೂಲ ಪ್ರತಿ ನಾಪತ್ತೆಯಾಗಿರುವ ಕುರಿತು ನಾವು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಆಗುತ್ತೆ. ನಮ್ಮನ್ನು ಬಿಟ್ಟು ಯಾರು ಅಧಿಕಾರ ಹಿಡಿಯಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಬಹಳ ಅಪೇಕ್ಷೆ ಪಟ್ಟಿದ್ದರು. ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಅಧಿಕಾರ ಕೊಟ್ಟರು ಹಾಗಾಗಿ ಸ್ವಾಭಾವಿಕವಾಗಿ ಕುಮಾರಸ್ವಾಮಿ ಅವರಿಗೆ ದುಃಖವಾಗಿದೆ. ಅದನ್ನು ಈಗ ಹೊರಹಾಕುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Previous articleಇ-ಪ್ರೊಕ್ಯೂರ್‌ಮೆಂಟ್‌ 2.0 ಪೋರ್ಟಲ್‌, ಡಿಐಎಸ್‌ ತಂತ್ರಾಂಶ ಲೋಕಾರ್ಪಣೆ
Next articleದೇಶದ ಐದಾರು ರಾಜ್ಯಗಳಲ್ಲಿ ಭೀಕರ ಬರ