ನೀರಿಗೆ ಇಲಿ ಪಾಷಾಣ: ಮೂವರು ವಿದ್ಯಾರ್ಥಿಗಳು ಅಸ್ವಸ್ಥ

0
34

ಕೋಲಾರ: ಮುರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಡೊಡ್ಡಪೊನ್ನಾಂಡಹಳ್ಳಿ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು. ಮೂವರು ಮಕ್ಕಳು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದಾರೆ. ಅಅಸ್ವಸ್ಥರಾಗಿದ್ದ ಮಕ್ಕಳಿಗೆ ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ವಿದ್ಯಾರ್ಥಿಯೊಬ್ಬ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ ಎನ್ನಲಾಗಿದ್ದು ಕೃತ್ಯ ಎಸಗಿದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Previous articleಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು
Next articleತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಅಜ್ಜನ ಬರ್ಬರ ಕೊಲೆ