ಯತ್ನಾಳ್‌ರಿಂದ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ

0
13

ಬೆಳಗಾವಿ: ಯತ್ನಾಳ್ ದ್ವೇಷದ, ಅಲ್ಪಸಂಖ್ಯಾತರ ವಿರುದ್ಧದ ರಾಜಕಾರಣ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತೆಲಂಗಾಣ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಾಶಿಮ್ ಪೀರಾ ದರ್ಗಾದ ಧರ್ಮಾಧಿಕಾರಿ ಸೈಯ್ಯದ್ ಮೊಹಮ್ಮದ್ ತನ್ವೀರ್ ಹಾಶ್ಮೀ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಮಾತನಾಡಿ ಹಾಶ್ಮೀ ಅವರೊಂದಿಗೆ ಬಹಳ ವರ್ಷಗಳಿಂದ ಸಂಬಂಧ ಇದೆ. ಅವರು ಚುನಾವಣೆ ಗೆಲ್ಲಲು ಈ ರೀತಿ ಮಾಡಬಾರದು. ಯತ್ನಾಳ್ ಮಹಾ ಸುಳ್ಳುಗಾರ. ಹಾಶ್ಮೀ ಅವರ ಮೇಲಿನ ಆರೋಪ ಸಾಬೀತು ಮಾಡಲಿ. ಅವರದ್ದೇ ಸರ್ಕಾರ 10 ವರ್ಷಗಳಿಂದ ಇದೆ. ಇಷ್ಟು ವರ್ಷ ಏನು ಮಾಡುತ್ತಿದ್ದರು. ಬರೀ ಆರೋಪ ಮಾಡುವುದಲ್ಲ ಅದನ್ನು ಸಾಬೀತು ಮಾಡಲಿ ಎಂದರು.
ವಿರೋಧ ಪಕ್ಷದ ನಾಯಕನ ಸ್ಥಾನ ಹಾಗೂ ಪಕ್ಷದ ಅಧ್ಯಕ್ಷರ ಸ್ಥಾನಕ್ಕೆ ಪ್ರಯತ್ನಿಸಿದ್ದರು. ಎರಡೂ ಸಿಕ್ಕದ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

Previous articleಐಸಿಎಸ್ ಸಂಪರ್ಕಿತ ಮೌಲ್ವಿ ಜತೆ ಸಿಎಂ ವೇದಿಕೆ ಹಂಚಿಕೆ ಪ್ರಕರಣ ಎನ್‌ಐಎ ತನಿಖೆಗೆ ಒಪ್ಪಿಸಲಿ
Next articleಪೈಲ್ಸ್ ನೋವು ಸಹಿಸದೇ ಯುವಕ ಆತ್ಮಹತ್ಯೆ