ಆರೋಗ್ಯಕಾರ್ಡ್ ವ್ಯಾಪ್ತಿಗೆ ಡಯಾಲಿಸಿಸ್ ಚಿಕಿತ್ಸೆ

0
10

ಬೆಳಗಾವಿ(ವಿಧಾನಸಭೆ): ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ಕೊರತೆ ಮತ್ತು ತಾಂತ್ರಿಕ ಸಿಬ್ಬಂದಿ ಕೊರತೆ ಕಾರಣಕ್ಕೆ ನಿತ್ಯ ರೋಗಿಗಳಿಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಡಯಾಲಿಸಿಸ್ ರೋಗಿಗಳು ಚಿಕಿತ್ಸೆ ಪಡೆಯುವ ಸಂಬಂಧ ಆರೋಗ್ಯಕಾರ್ಡ್ ವ್ಯಾಪ್ತಿಗೆ ಚಿಕಿತ್ಸೆಯ ಸೇವೆ ತರುವ ಬಗ್ಗೆ ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಪ್ರಶ್ನೋತ್ತರ ವೇಳೆಯಲ್ಲಿ ಉಡುಪಿ ಶಾಸಕ ಯಶಪಾಲ್‌ಸುವರ್ಣ ಅವರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

Previous articleಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮರುಪರಿಶೀಲನೆ
Next articleವಿಶ್ವವಿದ್ಯಾಲಯಗಳ ಪ್ರಗತಿಗೆ ಸರ್ಕಾರ ಬದ್ಧ