ದೆಹಲಿಗೆ ಹೋಗಿದ್ದು ವೈಯಕ್ತಿಕ ಕೆಲಸಕ್ಕೆ

0
7

ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ ಚುನಾವಣೆಯ ವಿಚಾರವನ್ನು ಚರ್ಚಿಸಿಲ್ಲವೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಧಾರವಾಡ ಆಕಾಂಕ್ಷಿಯಾಗಿ ಶೆಟ್ಟರ್ ಹೆಸರು ಶಿಫಾರಸ್ಸು ವಿಚಾರ, ಇನ್ನು ಯಾರ ಹೆಸರನ್ನು ಕಳುಹಿಸಿಲ್ಲ. ಅದು ಹೇಗೆ ನನ್ನದೇ ಒಂದು ಹೆಸರು ಕಳಿಸಿದ್ದಾರೆ ಅಂತ ಹೇಳ್ತೀರಿ..? ನಿಮಗೆ ಆ ಪಟ್ಟಿ ಕೊಟ್ಟವರು ಯಾರು..? ಮೊನ್ನೆಯಷ್ಟೇ ವೀಕ್ಷಕರ ಸಭೆಯಾಗಿದೆ. ಟಿಕೆಟ್ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಇಷ್ಟರ ನಡುವೆಯೇ ನನ್ನದೊಂದೇ ಹೆಸರು ಕಳಿಸಿದ್ದಾರೆ ಅಂತ ಹೇಳುತ್ತೀದ್ದೀರಿ ಎಂದು ಪ್ರಶ್ನಿಸಿದರು.
ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನಗಿಂತ ಒಂದು ದಿನ ಮುಂಚೆ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೇನೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು ಎಂದರು.
ಲೋಕಸಭೆ ಚುನಾವಣೆ ವಿಚಾರವಾಗಿ ಸಿಎಂ ಸಮ್ಮುಖದಲ್ಲಿಯೇ ನಾನು ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದೇನೆ. ಕಾಂಗ್ರೆಸ್‌ನಿಂದ ಯಾರನ್ನೇ ನಿಲ್ಲಿಸಿದರೂ ನಾನು ಫೈಟ್ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸುತ್ತೇನೆ. ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.

Previous articleಸಕ್ಕರೆ ಕಾರ್ಖಾನೆಗಳು ರೈತರ ಹಿತ ಕಾಪಾಡಲಿ
Next articleಗೋವಾ ಗಡಿಯಲ್ಲಿ ಟೆಸ್ಟೇ ಇಲ್ಲ…