ನಾವು ರಾಮ ಭಕ್ತರು, ಹನುಮನಾಗಲು ಆಸ್ಪದ ಕೊಡಬೇಡಿ

0
13

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಬಂಧನ ಖಂಡಿಸಿ ಶಹರ ಪೊಲೀಸ್ ಠಾಣೆಯ ಎದುರು ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಕಾವು ಪಡೆದಿದೆ.
ಪ್ರತಿಭಟನಾ ಸ್ಥಳಕ್ಕೆ ವಿಪಕ್ಷ ನಾಯಕ ಆರ್. ಅಶೋಕ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಮತ್ತಷ್ಟು ಉತ್ಸಾಹಗೊಂಡು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಮಾಜಿ ಸಿಎಂ ಜಗದೀಶ ಶೆಟ್ಟರ ಹಾಗೂ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ವಿರುದ್ಧ ಘೋಷಣೆ ಕೂಗಿ ಆಕ್ರೋಷ ಹೊರ ಹಾಕಿದರು.
ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾ ಸ್ಥುತಿ ಹಾಡುತ್ತ ಭಜನೆ ಮಾಡಿದ್ದಲ್ಲದೇ, ಸಿದ್ದರಾಮಯ್ಯ ಲುಚ್ಚಾ ಎಂದು ಘೋಷಣೆ ಕೂಗಿದರು. ಇದೇ ವೇಳ ಪೊಲೀಸ್ ಠಾಣೆ ಎದುರು ನಿಲ್ಲಿಸಲಾಗಿದ್ದ ಪೊಲೀಸ್ ಬಸ್ ತೆರವುಗೊಳಿಸುವಂತೆ ಪ್ರತಿಭಟನಾ ನಿರತರು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಪೊಲೀಸರ ನಡೆಗೆ ಆಕ್ರೋಷಗೊಂಡ ಆರ್. ಅಶೋಕ, ‘ನಾವು ರಾಮ ಭಕ್ತರಾಗಿ ಬಂದಿದ್ದೇವೆ. ಆಂಜನೇಯ ಆಗೋಕೆ ಬಿಡಬೇಡಿ ಎಂದು ಎಚ್ಚರಿಕೆ ಕೊಟ್ಟ ನೀಡಿದರು. ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ್ ಬೆಲ್ಲದ , ಎಂ ಆರ್ ಪಾಟೀಲ್, ಪ್ರದೀಪ್ ಶೆಟ್ಟರ ಸೇತಿದಂತೆ ಬಿಜೆಪಿ ಪಾಲಿಕೆ ಸದಸ್ಯರು, ನೂರಾರು ಕಾರ್ಯಕರ್ತರು ಹಾಜರಿದ್ದರು.

Previous articleಹುಬ್ಬಳ್ಳಿ ಪ್ರಕರಣ: ಜಾಮೀನು ಅರ್ಜಿ ಸಲ್ಲಿಕೆ
Next articleಅಘೋಷಿತ ಬಂದ್ ವಾತಾವರಣ