Home Advertisement
Home ತಾಜಾ ಸುದ್ದಿ ಸ್ತಬ್ಧಚಿತ್ರದಲ್ಲೂ ಸಿಎಂ ರಾಜಕೀಯ

ಸ್ತಬ್ಧಚಿತ್ರದಲ್ಲೂ ಸಿಎಂ ರಾಜಕೀಯ

0
108

ಹುಬ್ಬಳ್ಳಿ: ಸಿದ್ದರಾಮಯ್ಯನವರೇ ರಾಜಕೀಯ ಮಾಡಬೇಕು ನಿಜ. ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ, ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು ಆಯ್ಕೆ ಮಾಡದೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಅವಮಾನ ಮಾಡಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಟೀಕೆಗೆ ಜೋಶಿ ಅವರು ಎಕ್ಸ್‌ ನಲ್ಲಿ ಉತ್ತರ ಕೊಟ್ಟಿದ್ದಾರೆ. ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನು ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.