ಧಾರವಾಡ: ನಕಲಿ ದಾಖಲೆಗಳೊಂದಿಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ೫೦ ಲಕ್ಷ ಮೌಲ್ಯದ ಮದ್ಯವನ್ನು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ನರೇಂದ್ರ ಟೋಲ್ ಬಳಿ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮ ಮದ್ಯವನ್ನು ಜಪ್ತಿ ಮಾಡಿದ್ದಾರೆ.
ದಾಳಿ ಸಂದರ್ಭದಲ್ಲಿ ವಿಚಾರಿಸಿದಾಗ ನಿರುಪಯುಕ್ತ ಆಯಿಲ್ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಟ್ಯಾಂಕರ್ ಚಾಲಕ ಮಾಹಿತಿ ನೀಡಿದರು. ಆದರೆ, ದಾಖಲೆ ಪರಿಶೀಲಸಿದಾಗ ನಕಲಿ ಜಿಎಸ್‌ಟಿ ಬಿಲ್ ಮತ್ತು ನಕಲಿ ಟ್ಯಾಂಕರ್ ಇರುವುದು ಖಚಿತವಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಟ್ಯಾಂಕರ್ ಚಾಲಕ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ವಿಜಯಕುಮಾರ ಸನದಿ, ಉಪ ಆಯುಕ್ತ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ.