ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ

0
62

ಬೆಂಗಳೂರಿನಲ್ಲಿ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ (BIETC) ಕ್ಯಾಂಪಸ್​ನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಕ್ಯಾಂಪಸ್ ಬೋಯಿಂಗ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. 43 ಎಕರೆ ಪ್ರದೇಶದಲ್ಲಿ 1,600 ಕೋಟಿ ರೂ. ವೆಚ್ಚದಲ್ಲಿ ಕ್ಯಾಂಪಸ್​ ನಿರ್ಮಾಣ ಮಾಡಲಾಗಿದೆ. ಈ ವೇಳೆ ಬೋಯಿಂಗ್ ಸುಕನ್ಯಾ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ್ದು, ದೇಶದ ಹೆಣ್ಣುಮಕ್ಕಳನ್ನು ಏವಿಯೇಷನ್ ಸೆಕ್ಟರ್​ನತ್ತ ಆಕರ್ಷಿಸುವ ಮತ್ತು ಮಹಿಳೆಯರಿಗೆ ತರಬೇತಿ ನೀಡಲು ಉತ್ತೇಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್​​ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್​ ಉಪಸ್ಥಿತರಿದ್ದರು.

Previous articleಸಚಿವ ಖರ್ಗೆ ಅವರಿಂದ ಪ್ರಧಾನಿಗೆ ಅವಮಾನ: ಸಂಸದ ಕಿಡಿ
Next articleಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ