Home Advertisement
Home ನಮ್ಮ ಜಿಲ್ಲೆ ಉಡುಪಿ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ: ಸಿಐಡಿ ತನಿಖೆಗೆ

ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ: ಸಿಐಡಿ ತನಿಖೆಗೆ

0
76

ಉಡುಪಿ: ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಪರಶುರಾಮ ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ಕಳಪೆ ಹಾಗೂ ಅವ್ಯವಹಾರದ ಬಗ್ಗೆ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿಗೆ ಒಪ್ಪಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸಿನಂತೆ ಮುಖ್ಯಮಂತ್ರಿ ಈ ಆದೇಶ ಹೊರಡಿಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜೊತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಫೆ.2ರಂದು ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಇದೀಗ ಮುಖ್ಯಮಂತ್ರಿ ಸಿಐಡಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

Previous articleಮನಮೋಹನ್‌ ಸಿಂಗ್‌ರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
Next articleವಿಧಾನಸೌಧ ಮತ್ತೊಮ್ಮೆ ಜನ ಕಲ್ಯಾಣ ಸೌಧ