ರಾಜ್ಯದ ವಿನಾಶಕಾಲಕ್ಕೆ ಬುನಾದಿ

0
14

ಬೆಂಗಳೂರು: ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದ್ದಾರೆ ಎಂದು ಹೆಚ್‌ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬಜೆಟ್ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ ಬಿಜೆಪಿ ಅವಧಿಯಲ್ಲಿ ಬೊಮ್ಮಾಯಿ ಬಜೆಟ್ ಮಂಡಿಸುವಾಗಿ ಹೂವು ಕಿವಿಗೆ ಇಟ್ಟುಕೊಂಡು ಸಿದ್ದರಾಮಯ್ಯ ಬಂದಿದ್ದರು. ಅ ಹೂವನ್ನ 7 ಕೋಟಿ ಜನರ ಕಿವಿಗೆ ಈಗ ಮುಡಿಸಿದ್ದಾರೆ.
ಸಿದ್ದರಾಮಯ್ಯಗೆ ಅನುಭವ, ಆಡಳಿತದ ಅನುಭವ ಇದೆ. ಆದರೆ ಅವರು ಬಜೆಟ್ ಓದುವಾಗಲೇ ನನಗೆ ಅನಿಸಿದ್ದು ಅವರಲ್ಲಿ ವಿಶ್ವಾಸದ ಕೊರತೆ ಎದ್ದು ಕಾಣುತ್ತಿದೆ ಅಂತ. ಈ ಬಜೆಟ್ ನೋಡಿದರೆ ಇದು ನಾಳೆ ಬಾ ಸರ್ಕಾರ ಎಂದು ಟಾಂಗ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರ 15ನೇ ಬಜೆಟ್ ಇದು. ಆದರೆ ಇವತ್ತಿನ ಸಿಎಂ ಬಜೆಟ್ ರಾಜ್ಯದ ವಿನಾಶಕಾಲಕ್ಕೆ ಬುನಾದಿ ಹಾಕಿದ್ದಾರೆ ಎಂದು ಹೆಚ್‌ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

Previous articleಲೋಕಾಯುಕ್ತ ಬಲೆಗೆ ಮೆಸ್ಕಾಂ ಕಿರಿಯ ಇಂಜಿನಿಯರ್
Next articleರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತಳ್ಳಿದ್ದಾರೆ