ಹಳ್ಳದಲ್ಲಿ ಕೊಚ್ಚಿಹೋದ ನಾಲ್ವರು ಮಹಿಳೆಯರು

0
20
ಮಳೆ

ಕೊಪ್ಪಳ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದ್ದು ನಾಲ್ವರು ಮಹಿಳೆಯರು ಹಳ್ಳದಲ್ಲಿ ಕೊಚ್ಚಿಹೋದ ದಾರುಣ ಘಟನೆ ಯಲಬುರ್ಗಾ ತಾಲೂಕಿನ ಸಂಕನೂರು ಬಳಿ ಸಂಭವಿಸಿದೆ.
ಶನಿವಾರ ರಾತ್ರಿ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ಸಮಯದಲ್ಲಿ ನಾಲ್ವರು ಮಹಿಳೆಯರು ಹಳ್ಳ ದಾಟಲು ಹೋದಾಗ ರಭಸದ ನೀರಿನಲ್ಲಿ ಕೊಚ್ಚಿ ಹೋಗಿದ್ದರು.
ಭುವನೇಶ್ವರಿ ಪೊಲೀಸ್ ಪಾಟೀಲ(೪೦), ಗಿರಿಜಾ ಮಾಲಿಪಾಟೀಲ್(೩೨) ಹಾಗೂ ವೀಣಾ ಬಸವನಗೌಡ ಪಾಟೀಲ(೧೯) ಹಾಗೂ ರೇಖಾ ಸಿದ್ದಯ್ಯ(೪೦) ಅವರ ಮೃತದೇಹ ಪತ್ತೆಯಾಗಿದೆ. ಶನಿವಾರ ರಾತ್ರಿಯೇ ನಾಲ್ವರು ಮಹಿಳೆಯರು ಕೊಚ್ಚಿ ಹೋಗಿದ್ದರು. ಭಾನುವಾರ ಬೆಳಗ್ಗೆಯಿಂದಲೇ ಎನ್‌ಡಿಆರ್‌ಎಫ್ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದರು. ಹಲವು ಗಂಟೆಗಳ ಬಳಿಕ ನಾಲ್ವರು ಮಹಿಳೆಯರ ಮೃತ ದೇಹ ಪತ್ತೆ ಮಾಡಲಾಯಿತು.

Previous articleದಾವಣಗೆರೆಯಲ್ಲಿ ಮಳೆ : ಕೊಚ್ಚಿ ಹೋದ ಭದ್ರಾ ನಾಲೆ
Next articleಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ವಿಚಾರಣಾಧೀನ ಕೈದಿ ಸಾವು