ಬೆಳಗಾವಿ: ಬೆಳಗಾವಿ ಮುಂದಿನ ದಿನಗಳಲ್ಲಿ ಎಥೆನಾಲ್ ಉತ್ಪಾದನೆ ಅಷ್ಟೇ ಅಲ್ಲ, ವಿಮಾನಗಳ ಇಂಧನ ಉತ್ಪಾದನೆ ಮಾಡುವ ಕೇಂದ್ರವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದರು.
400 ಕಿ.ಮೀ. ರಸ್ತೆ ಕಾಮಗಾರಿ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಲೋಕೋಪಯೋಗಿ ಸಚಿವರು ಕರ್ನಾಟಕದಲ್ಲಿ ಎಥೆನಾಲ್ ಬಳಕೆಗೆ ಪ್ರೋತ್ಸಾಹ ಕೊಡಿ. ಇದರಿಂದ ಪೆಟ್ರೋಲ್ ಗಿಂತಲೂ ಕಡಿಮೆ ದರದಲ್ಲಿ ಎಥೆನಾಲ್ ಲಭ್ಯವಾಗಲಿದೆ. ಪೆಟ್ರೋಲ್ನಲ್ಲಿ ಎಥೆನಾಲ್ ಹಾಕಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಥೆನಾಲ್ನ್ನು ಡೀಸೆಲ್ನಲ್ಲಿ ಉಪಯೋಗಿಸಲಾಗುವುದು ಎಂದರು.