ಹುಬ್ಬಳ್ಳಿ : ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ಅವಳಿನಗರಕ್ಕೆ ಆಗಮಿಸಿದ್ದು, ಧಾರವಾಡ ಐಐಟಿಯಲ್ಲಿ ಅಭಿವೃದ್ಧಿಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.
ಇದಕ್ಕೂ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿಯವರನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಮೇಯರ್ ವೀಣಾ ಬರದ್ವಾಡ, ಶಾಸಕ ಎಂ.ಆರ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರದೀಪಶೆಟ್ಟರ, ಜಿಲ್ಲಾಧಿಕಾರಿ ದಿವ್ಯಪ್ರಭ ಜಿಆರ್ ಜೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ್ ಅವರು ಸ್ವಾಗತಿಸಿದರು.