ನವದೆಹಲಿ: ಕಳೆದ 26 ದಿನಗಳಲ್ಲಿ, ನೀವು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದೀರಿ? ಎಂದು ಸುಪ್ರೀಂ ಕೋರ್ಟ್ ಎಸ್‌ಬಿಐಗೆ ಪ್ರಶ್ನಿಸಿದೆ.
ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ ಅಂತ್ಯದವರೆಗೂ ಅಂದರೆ ನಾಲ್ಕು ತಿಂಗಳುಗಳ ಕಾಲಾವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಿರ್ಣಾಯಕ ವಿಚಾರಣೆಯನ್ನು ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಎಸ್‌ಬಿಐ ಮೊಹರು ಮಾಡಿದ ಕವರ್ ತೆರೆದು ವಿವರಗಳನ್ನು ಒಟ್ಟುಗೂಡಿಸಿ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕು, ಮಾರ್ಚ್ 12 ಮಂಗಳವಾರ ಸಂಜೆಯೊಳಗೆ ಚುನಾವಣೆ ಬಾಂಡ್‌ಗಳ ಕುರಿತು ಎಸ್‌ಬಿಐ ಮಾಹಿತಿ ಒದಗಿಸಬೇಕು ಎಂದು ಆದೇಶಿಸಿದೆ.