ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಸಿಎಂ

0
16
ಮೀಸಲಾತಿ

ಬೆಂಗಳೂರು: ಬಹಳ ವರ್ಷಗಳ ನ್ಯಾಯಸಮ್ಮತವಾದ ಬೇಡಿಕೆ, ಸಂವಿಧಾನದಲ್ಲಿ ಹೇಳಿರುವಂತೆ ಜನಸಂಖ್ಯೆಯ ಆಧಾರದಲ್ಲಿ ಮೀಸಲಾತಿ ನೀಡಬೇಕೆಂಬ ಬೇಡಿಕೆಯಂತೆ ಪರಿಶಿಷ್ಟ ಜಾತಿಗೆ ಶೇ. 15ರಷ್ಟಿದ್ದ ಮೀಸಲಾತಿಯನ್ನು ಶೇ. 17ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ. 3ರಿಂದ ಶೇ. 7ಕ್ಕೆ ಮೀಸಲಾತಿ ಹೆಚ್ಚಿಸಲು ಒಮ್ಮತದ ತೀರ್ಮಾನ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿರುವ ವರದಿ ಕುರಿತು ಇಂದು ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯ ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

Previous articleಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಸಿಎಂ
Next articleನವೆಂಬರ್‌ನಲ್ಲಿ ವಿಧಾನಸೌಧಕ್ಕೆ ʻಪಂಚಮಸಾಲಿಗರʼ ಮುತ್ತಿಗೆ