ಅಮಿತ್ ಶಾ ಭೇಟಿಯಾದ ಜನಾರ್ದನ ರೆಡ್ಡಿ

0
11

ನವದೆಹಲಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಜನಾರ್ದನ ರೆಡ್ಡಿ ಪೋಸ್ಟ್‌ ಮಾಡಿದ್ದು ಭಾರತ ರಾಷ್ಟ್ರದ ಕೇಂದ್ರ ಗೃಹಮಂತ್ರಿಗಳಾದ ಅಮಿತ್ ಶಾ ಜಿಯವರ ಆಹ್ವಾನದ ಮೇರೆಗೆ ನವದೆಹಲಿಯಲ್ಲಿ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷನಾಗಿ ಭೇಟಿ ಮಾಡಿ ಕರ್ನಾಟಕ ರಾಜ್ಯದ ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು ನನಗೆ ಬಹಳ ಸಂತೋಷವನ್ನು ತಂದಿದೆ ಎಂದಿದ್ದಾರೆ.
ಜನಾರ್ದನ ರೆಡ್ಡಿ ಅವರ ಈ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಪಾರ್ಟಿ ಕಟ್ಟಿಕೊಂಡು ಗಂಗಾವತಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

Previous articleಸಾಲಭಾದೆ: ರೈತ ಆತ್ಮಹತ್ಯೆ
Next articleರಾಜ್ಯ ಸಂಚಾಲಕರಾಗಿ ಸುನಿಲ್ ಕುಮಾರ್