SK Home Ad
Home ತಾಜಾ ಸುದ್ದಿ ಈಶ್ವರಪ್ಪ ಮನವೊಲಿಕೆಗೆ ಯತ್ನ

ಈಶ್ವರಪ್ಪ ಮನವೊಲಿಕೆಗೆ ಯತ್ನ

0
100
ಆರ್‌ಎಸ್ಎಸ್

ಹುಬ್ಬಳ್ಳಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದ್ದು, ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮನವೊಲಿಕೆ ಯಶಸ್ವಿಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆಯಾಗುತ್ತದೆ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ರಮೇಶ ಜಾರಕಿಹೊಳಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿರಬಹುದು. ಕ್ಷೇತ್ರ ಬದಲಾವಣೆ ಕುರಿತು ಜಾರಕಿಹೊಳಿ ಏನು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.
ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ಮಾಡಲಿದ್ದೇವೆ. ಶಿಗ್ಗಾವಿ ಕ್ಷೇತ್ರದಲ್ಲಿ ಇದೀಗ ಪ್ರಚಾರ ಆರಂಭಿಸಿದ್ದೇವೆ. ಈ ಬಾರಿ ಶಿಗ್ಗಾವಿ ಕ್ಷೇತ್ರದಿಂದ ಪ್ರಲ್ಹಾದ ಜೋಶಿ ಅವರಿಗೆ ಕಳೆದ ಬಾರಿಗಿಂತ ಹೆಚ್ಚಿನ ಲೀಡ್ ಕೊಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾಳೆ ಹಾವೇರಿ ಲೋಕಸಭೆ ವ್ಯಾಪ್ತಿಯ ಗದಗ ಜಿಲ್ಲೆಗೆ ಭೇಟಿ ನೀಡಲಿದ್ದೇನೆ. ಅಲ್ಲಿಯೂ ಪ್ರಚಾರ ನಡೆಸಲಿದ್ದೇವೆ ಎಂದು ಅವರು ಹೇಳಿದರು.