ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

0
17

ಬೆಳಗ್ಗೆ ಉಪಹಾರ ಸೇವಿಸಿ ವಾಂತಿ ಭೇದಿಯಿಂದಾಗಿ ಅಸ್ವಸ್ಥಗೊಂಡ ಮಕ್ಕಳು ಅರಕೇರಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ

ರಾಯಚೂರು: ಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ.
ರಾಯಚೂರು ಜಲ್ಲೆಯ ದೇವದುರ್ಗ ತಾಲೂಕಿನ ಅರಕೇರದ ಬಾಲಕಿಯರ ವಸತಿ ನಿಲಯದಲ್ಲಿ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ ಘಟನೆ ನಡೆದಿದ್ದು, ಸುಮಾರು 50 ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಾಂತಿ ಭೇದಿ ಸೇರಿ ತಲೆ ಸುತ್ತಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೆಲ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ, ಬೆಳಗ್ಗೆ ವಗ್ಗರಣೆ ಉಪಹಾರ ಸೇವಿಸಿದ್ದ ಮಕ್ಕಳು ರಾತ್ರಿ ಚಪಾತಿ ಹಾಗೂ ಕಡಲೆ ಕಾಳು ಊಟ ಮಾಡಿದ್ದರು‌ ಬೆಳಗ್ಗೆ ಉಪಹಾರ ನಂತರ ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.
ಅರಕೇರಾ ಪ್ರಾಥಮಿಕ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ಪಡೆಯುತ್ತಿದ್ದು ಸ್ಥಳಕ್ಕೆ ಡಿಹೆಚ್ಒ ಡಾ ಸುರೇಂದ್ರ ಬಾಬು ಭೇಟಿ ನೀಡಿ ತೀವ್ರ ಅಸ್ವಸ್ಥಗೊಂಡ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.

Previous articleಹನುಮಾನ್ ಚಾಲೀಸಾ ಕೇಸ್‌: ಶೋಭಾ ಕರಂಧ್ಲಾಜೆ ಸೇರಿ ಹಿಂದೂ ಕಾರ್ಯಕರ್ತರು ವಶಕ್ಕೆ
Next articleಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಹೊರಟಿದ್ದಾರೆ…