ಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಹೊರಟಿದ್ದಾರೆ…

0
27

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ ನಡೆದಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಅವರು ಇಂದು ಮಾಧ್ಯಮಗೋಷ್ಠಿ ನಡೆಸಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ಭಾರಿ ಪ್ರಮಾಣದ ಚುನಾವಣಾ ಅಕ್ರಮಗಳ ವಿರುದ್ಧ ಸಾಕ್ಷಿ ಸಮೇತ ಮಾತನಾಡಿದರು. ಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಡಿಕೆ ಸಹೋದರರು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮತ್ತು ಸಂಸದ ಡಿ.ಕೆ ಸುರೇಶ್ ಅಧಿಕಾರ ದುರ್ಬಳಕೆ ಮಾಡಿಕೊಂಡು, ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಾಗೂ ಸೀರೆ ಹಂಚುವ ಮೂಲಕ ಚುನಾವಣಾ ಅಕ್ರಮದಲ್ಲಿ ತೊಡಗಿದ್ದು, ಈ ಕುರಿತು ಕೇಂದ್ರ ಚುನಾವಣಾ ಆಯೋಗ ಕೂಡಲೇ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಡಿಕೆ ಸಹೋದರರ ಈ ತಂತ್ರಗಳಿಗೆಲ್ಲ ನಾವು ಹೆದರುವುದಿಲ್ಲ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ಪೊಲೀಸ್ ದಬ್ಬಾಳಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Previous articleಉಪಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Next articleವಿರಾಟ್ ವಿಬಿನ್ನ ಲುಕ್‌ನಲ್ಲಿ