ಹಿಂದೂ ವಿರೋಧಿ ನಡೆಗೆ ರಾಜ್ಯ ಕಾಂಗ್ರೆಸ್ ಕಾರಣ

0
8

ಹುಬ್ಬಳ್ಳಿ: ರಾಜ್ಯದಲ್ಲಿ ಹಿಂದೂ ಮತ್ತು ದೇಶ ವಿರೋಧಿ ನಡೆ ತೀವ್ರವಾಗಿದ್ದು, ಕಾಂಗ್ರೆಸ್ ಸರ್ಕಾರವೇ ಇದಕ್ಕೆಲ್ಲ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳು ನಡೆಯುತ್ತವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ ಮತ್ತು ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಇಂತಹ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಬಾಯಿ ಬಿಡುತ್ತಿಲ್ಲ. ಹಿಂದೂ ವಿರೋಧಿ ನಡೆ ಅನುಸರಿಸುತ್ತಿರುವ ಕಿಡಿಗೇಡಿಗಳಿಗೆ ಕಾಂಗ್ರೆಸ್ ಸರ್ಕಾರ ಆಶ್ರಯ ನೀಡುತ್ತಿದೆ. ಇದೇ ರೀತಿ ತುಷ್ಟೀಕರಣದ ರಾಜಕಾರಣ ಮಾಡಿದರೆ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದರು

Previous articleಸಂತ ಶರೀಫ, ಗುರುಗೋವಿಂದ ಭಟ್ಟರ ಮಹಾರಥೋತ್ಸವ
Next articleನೀತಿ ಸಂಹಿತೆಯ ಸಂತಸ-ಸಂಕಟ