ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ

0
6

ಬೆಂಗಳೂರು: ಸೋಮವಾರದಿಂದ ರಾಜ್ಯಾದ್ಯಂತ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ.
ರಾಜ್ಯದಲ್ಲಿ ಈ ಬಾರಿ ಪರೀಕ್ಷೆಗೆ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಈ ಪೈಕಿ 4,41,910 ಬಾಲಕರು, 4,28,058 ಬಾಲಕಿಯರಿದ್ದಾರೆ. ಒಟ್ಟು ವಿದ್ಯಾರ್ಥಿಗಳ ಪೈಕಿ 8.10 ಲಕ್ಷಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು (ರೆಗ್ಯಲರ್), 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 54,254 ವಿಶೇಷ ಚೇತನ ವಿದ್ಯಾರ್ಥಿಗಳಿದ್ದಾರೆ. ಒಟ್ಟು 2,750 ಕೇಂದ್ರಗಳಲ್ಲಿ ಏ.6ರವರೆಗೆ ಪರೀಕ್ಷೆಗಳು ನಡೆಯಲಿವೆ.

Previous articleಚುನಾವಣಾ ಪ್ರಚಾರ ಆರಂಭಿಸಿದ ಹೆಬ್ಬಾಳಕರ್ ಪುತ್ರ
Next articleಕ್ಯಾಂಪ್ ಠಾಣೆ ಆವರಣದಲ್ಲಿ ಅಪರಿಚಿತ ಶವ ಪತ್ತೆ