ಗೋಕರ್ಣಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

0
9

ಕಾರವಾರ: ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಆಗಮಿಸಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಶೇಷ ಪೂಜೆ ಸಲ್ಲಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ ರುದ್ರಾಭಿಷೇಕ, ಕ್ಷೀರಾಭಿಷೇಕ ಮಾಡಿಸಿದರು. ಹತ್ತು ಜನ ಅರ್ಚಕರಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು
ಇನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಸಚಿವ ಮಂಕಾಳ ವೈದ್ಯ ಭಾಗಿಯಾಗಿದ್ದು, ಪೂಜೆ ಬಳಿಕ ಕುಮಟಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಪರ ಪ್ರಚಾರ ನಡೆಸಲಿದ್ದಾರೆ.

Previous articleಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ
Next articleಆರ್‌ಎಫ್‌ಒ ಮನೆ ಮೇಲೆ ಲೋಕಾ ದಾಳಿ