ರಾಜ್ಯದಲ್ಲಿ ಅಮಿತ್‌‌ ಷಾ ಅಬ್ಬರ

0
8

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಡರಾತ್ರಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದಾರೆ.
ತಾಜ್ ವೆಸ್ಟ್ ಎಂಡ್‌ ಹೋಟೆಲಿನಲ್ಲಿ ವಾಸ್ತವ್ಯ ಹೂಡಿರುವ ಅಮಿತ್‌ ಶಾ ಇಂದು ಚುನಾವಣಾ ಪ್ರಚಾರ ಕಾರ್ಯಗಳ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ, ಅವರು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಹಿಸಲಿದ್ದಾರೆ. ಮಧ್ಯಾಹ್ನ 2:00 ಗಂಟೆಗೆ ತಾಜ್‌ ವೆಸ್ಟ್‌ ಎಂಡ್‌ನಲ್ಲಿ ಕೋರ್‌ ಕಮಿಟಿ ಸಭೆ ನಡೆಯಲಿದೆ, ಇಂದು ಸಂಜೆ 5:30ಕ್ಕೆ ಚಿಕ್ಕಮಗಳೂರು ಗ್ರಾಮದಿಂದ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ಆರಂಭಿಸಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಪರ ಸುಮಾರು ಒಂದೂವರೆ ಕಿ.ಮೀ ದೂರ ಮೆರವಣಿಗೆ ನಡೆಸಿ ಮತಯಾಚನೆ ಮಾಡಲಿದ್ದಾರೆ.

Previous articleಬಾಬಾ ರಾಮದೇವ್ ನ್ಯಾಯಾಲಯಕ್ಕೆ ಹಾಜರು
Next articleಎಎಪಿ ಸಂಸ್ಥಾಪಕ ಸದಸ್ಯ ದಿನೇಶ್ ವಘೇಲಾ ನಿಧನ