ವಿಜಯಪುರ-ಮಂಗಳೂರು ಎಕ್ಸ್‌ಪ್ರೆಸ್ ರೈಲು: ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೂ ವಿಸ್ತರಣೆ

0
16

ಹುಬ್ಬಳ್ಳಿ: ವಿಜಯಪುರ ಮತ್ತು ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಚಲಿಸುವ ದೈನಂದಿನ ವಿಶೇಷ ಎಕ್ಸ್ ಪ್ರೆಸ್ ರೈಲು( ಸಂಖ್ಯೆ ೦೭೩೭೭/೦೭೩೭೮) ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ ಎಂದು ನೈಋತ್ಯ ರೈಲ್ವೆ ವಲಯ ತಿಳಿಸಿದೆ.
ವಿಜಯಪುರ-ಮಂಗಳೂರು ಜಂಕ್ಷನ್ ಡೈಲಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೦೭೩೭೭) ಮಂಗಳೂರು ಸೆಂಟ್ರಲ್ ನಿಲ್ದಾಣದವರೆಗೆ ಸಂಚರಿಸಲಿದೆ.
ಮAಗಳೂರು ಜಂಕ್ಷನ್-ವಿಜಯಪುರ ಡೈಲಿ ವಿಶೇಷ ಎಕ್ಸ್ ಪ್ರೆಸ್ ರೈಲು (ರೈಲು ಸಂಖ್ಯೆ ೦೭೩೭೭) ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಲಿದೆ.
ಏಪ್ರಿಲ್ ೨೦ ರಿಂದ ರೈಲು (ರೈಲು ಸಂಖ್ಯೆ ೦೭೩೭೭) ವಿಜಯಪುರ ನಿಲ್ದಾಣದಿಂದ ಮಧ್ಯಾಹ್ನ ೩:೩೦ ಗಂಟೆಗೆ ಹೊರಟು ಮರುದಿನ ಬೆಳಿಗ್ಗೆ ೯:೫೦ ಗಂಟೆಗೆ ಮಂಗಳೂರು ಸೆಂಟ್ರಲ್ ನಿಲ್ದಾಣವನ್ನು ತಲುಪಲಿದೆ.
ಏಪ್ರಿಲ್ ೨೧ ರಿಂದ ರೈಲು (ರೈಲು ಸಂಖ್ಯೆ ೦೭೩೭೮) ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ ೨:೩೫ ಗಂಟೆಗೆ ಹೊರಟು ಮರುದಿನ ಬೆಳಗ್ಗೆ ೯.೩೫ ಕ್ಕೆ ವಿಜಯಪುರ ನಿಲ್ದಾಣಕ್ಕೆ ಆಗಮಿಸಲಿದೆ.
ವಿಜಯಪುರ-ಮಂಗಳೂರು ಜಂಕ್ಷನ್-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ ೦೭೩೭೭/೦೭೩೭೮ ) ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದ ನಂತರ, ರೈಲುಗಳ ಸಂಖ್ಯೆ ೦೭೩೩೮ ಗುಂತಕಲ್-ಎ?ಎಕ್ಸಪ್ರೆಸ್ ಹುಬ್ಬಳ್ಳಿ ಡೈಲಿ ಪ್ಯಾಸೆಂಜರ್ ಸ್ಪೆಷಲ್ ಮತ್ತು ರೈಲು ಸಂಖ್ಯೆ ೦೬೪೮೪ ಕಬಕಪುತ್ತೂರು-ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ವೇಳಾಪಟ್ಟಿಯನ್ನು ಏಪ್ರಿಲ್ ೨೦ ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ರೈಲುಗಳ ಪರಿಷ್ಕೃತ ವೇಳಾಪಟ್ಟಿಗಾಗಿ ದಯವಿಟ್ಟು ಈ ಕೆಳಗಿನ ಲಿಂಕ್ https://swr.indianrailways.gov.in/view_detail.jsp?lang=0&dcd=7356&id=0,4,268 ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ಪ್ರಯಾಣಿಕರು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೧೩೯ ಗೆ ಸಂಪರ್ಕಿಸಿ ಅಥವಾ ಭಾರತೀಯ ರೈಲ್ವೆ ವೆಬ್ ಸೈಟ್ www.enquiry.indianrail.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Previous articleಸಾತ್ವಿಕ್ ಆರೋಗ್ಯದಲ್ಲಿ ಸ್ಥಿರ: ಆಸ್ಪತ್ರೆಯಲ್ಲೂ ಹರ್ಷ
Next articleಏ. ೮ರ ನಂತರ ೨೫ ಜಿಲ್ಲೆಗಳಲ್ಲಿ ಮಳೆ