ಧಾರವಾಡ: ಲೋಕಸಭಾ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದೆ.
ನಾಮಪತ್ರಕೆ ಸಲ್ಲಿಕೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೆ ಜಿಲ್ಲಾಧಿಕಾರಿ ಕಚೇರಿಯ ೨೦೦ ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೆಡ್ ಹಾಕಿ ತಪಾಸಣೆ ಮಾಡಲಾಗುತ್ತಿದೆ. ಜೊತೆಗೆ ೧೦೦ ಮೀ ವ್ಯಾಪ್ತಿಯ ಒಳಗಡೆ ವಾಹನ ನಿಷೇಧ ಮಾಡಲಾಗಿದೆ. ಅಲ್ಲದೇ ೨೦೦ ಮೀ. ವ್ಯಾಪ್ತಿಯ ಒಳಗಡೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಒಟ್ಟು ೧೬ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.
ನಾಮಪತ್ರ ಸಲ್ಲಿಕೆಗೆ ಎ. ೧೯ ಕೊನೆಯ ದಿನವಾಗಿದ್ದು, ಮೊದಲ ದಿನವಾದ ಶುಕ್ರವಾರ ಮಧ್ಯಾಹ್ನದ ವರೆಗೆ ಯಾವುದೇ ನಾಮಪತ್ರ ಸಲ್ಲಿಕೆ ಆಗಲಿಲ್ಲ.