ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯನಗರದಲ್ಲಿ ಎರಡು ಕಾರು ಒಂದು ಬೈಕ್‌ನ್ನು ಚುನಾವಣಾ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಇದರಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದೆ. ಬೈಕ್‌ನಲ್ಲಿ ಒಂದು ಬ್ಯಾಗ್, ಎರಡು ಕಾರ್‌ನಲ್ಲಿ ತಲಾ ಒಂದೊಂದು ಬ್ಯಾಗ್‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ದಾಖಲೆ ರಹಿತ ಹಣ ಎಲ್ಲಿಂದ ಬಂತು ಎಲ್ಲಿಗೆ ಹೋಗುತ್ತಿತ್ತು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.
ಬೆಳಗ್ಗೆ ವಾಹನದಲ್ಲಿ ಹಣ ಇರುವ ಬಗ್ಗೆ ಕರೆ ಬಂದ ಆಧಾರದ ಮೇಲೆ ಕರೆ ಬಂದ ಮೂರು ನಿಮಿಷಗಳಲ್ಲೇ ಸ್ಥಳಕ್ಕೆ ಅಧಿಕಾರಿ ನಿಖಿತ ಅವರು ಒಬ್ಬರೇ ತೆರಳಿ, ಎರಡು ಕಾರು ಒಂದು ಬೈಕ್‌ನ್ನು ಸೀಜ್ ಮಾಡಿದ್ದಾರೆ, ಅವರು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸ್ಕೂಟರ್‌ನಿಂದ ಫಾರ್ಚೂನರ್ ಕಾರಿಗೆ ಹಣ ಶಿಫ್ಟ್ ಮಾಡುತ್ತಿದ್ದರು. ಸುಮಾರು 1.40 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್ ಎಂದು ಸಬುಬೂ ಹೇಳಿ ಕಾರನ್ನು ಲಾಕ್ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದು, ಫಾರ್ಚೂನರ್ ನಂಬರ್‌ನ್ನು ದಾಖಲಿಸಿಕೊಳ್ಳಲಾಗಿದೆ. ಇನ್ನು ಹಣ ಎಣಿಸಲು ಸಾಧ್ಯವಾಗದೆ ಬ್ಯಾಗ್‌ನ್ನು ಚುನಾವಣಾ ಅಧಿಕಾರಿಗಳು ಪೊಲೀಸ್ ಠಾಣೆಗೆ ತಂದಿದ್ದಾರೆ.