Home Advertisement
Home ತಾಜಾ ಸುದ್ದಿ ದಲಿತರ ಮನೆಯಲ್ಲಿ ಸಿಎಂಗೆ ಆತಿಥ್ಯ

ದಲಿತರ ಮನೆಯಲ್ಲಿ ಸಿಎಂಗೆ ಆತಿಥ್ಯ

0
377
ದಲಿತ ಕುಟುಂಬ

ಹೊಸಪೇಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿ ಉಪಹಾರ ಸೇವಿಸಿದರು. ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಕೊಲ್ಲಾರಪ್ಪ ಅವರ ಮೊಮ್ಮಗಳು ಅಶ್ವಿನಿ ತಡಕಲ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿರುವ ವಿಷಯ ತಿಳಿದು ಇಂಜಿನಿಯರ್ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಅವಳ ಶಿಕ್ಷಣ, ಕಾಲೇಜು ವಾತಾವರಣ ಮೊದಲಾದ ಕುರಿತು ಮಾಹಿತಿ ಪಡೆದರು. ಕಾಲೇಜು ಚೆನ್ನಾಗಿದೆ. ಆದರೆ ಮೆಸ್ ಬಿಲ್ ದುಬಾರಿ ಎಂದು ಆಕೆ ಮುಖ್ಯಮಂತ್ರಿಯವರ ಗಮನ ಸೆಳೆದಾಗ ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ಮನೆಯವರು ಪ್ರೀತಿಯಿಂದ ಉಣಬಡಿಸಿದ ಉಪಹಾರ, ಚಹಾ ಸೇವಿಸಿ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜುಗೌಡ ಇತರರಿದ್ದರು.