ಪ್ರಶಸ್ತಿ ಗೆದ್ದು ಇತಿಹಾಸ ರಚಿಸಿದ ಡಿ.ಗುಕೇಶ್

0
8

ಕ್ಯಾಂಡಿಡೇಟ್ ಚೆಸ್ ಸ್ಪರ್ಧೆಯನ್ನು ಗೆದ್ದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಗುಕೇಶ್ ಪಾತ್ರರಾಗಿದ್ದಾರೆ, ಟೊರೆಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಅಗಿ ಹೊರಹೊಮ್ಮಿದ್ದು. ಇದಕ್ಕೂ ಮುನ್ನ 2014 ರಲ್ಲಿ 5 ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಈ ಸಾಧನೆ ಮಾಡಿದ್ದರು.
ಈ ಗೆಲುವಿನೊಂದಿಗೆ 17 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಅವರು ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಪಂದ್ಯಾವಳಿಯನ್ನು ಗೆದ್ದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಹಾಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ವಿರುದ್ಧ ಸ್ಪರ್ಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ.

Previous articleATM ನಲ್ಲಿ ಅಗ್ನಿ ಅವಘಡ
Next articleದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆ…?