ಬೆಂಕಿ ಅವಘಡ : ಮತದಾನದಿಂದ ಉಳಿದ ಜೀವಗಳು

0
22


ತುಮಕೂರು: ಇಂದು ಮತದಾನದಿಂದಾಗಿ  ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.
ಜಿಲ್ಲೆಯ ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಚಿಂಪುಗಾನ ಹಳ್ಳಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಗೆ ಹತ್ತಕ್ಕೂ ಹೆಚ್ಚು ಗುಡಿಸಲು ಸುಟ್ಟು ಭಸ್ಮವಾಗಿವೆ.
ಬೆಂಕಿಯ ಕೆನ್ನಾಲಿಗೆಗೆ ಸುಮಾರು 5 ಗುಡಿಸಲಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಪೈಕಿ ಎರಡಕ್ಕೂ ಗ್ಯಾಸ್ ಸಿಲಿಂಡರ್ ಸ್ಪೋಟ ಆಗಿವೆ. ಗುಡಿಸಲಿನಲ್ಲಿದ್ದ ಜನರು ಮತದಾನ ಮಾಡಲು ಮತಗಟ್ಟೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗದೆ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

Previous articleಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಕಾರು
Next articleದಲಿತರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್