ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಶಾಸಕ ರಾಜು ಕಾಗೆ

0
7

ಬೆಳಗಾವಿ: ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಶಾಸಕ ರಾಜು ಕಾಗೆ ಪ್ರಶ್ನೆ ಮಾಡಿದ್ದಾರೆ.
ಶಾಸಕ ರಾಜು ಕಾಗೆ ಪ್ರಚಾರ ಸಭೆಯಲ್ಲಿ ಮಾತನಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ ಕಾಗವಾಡ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಮಂಗಳವಾರ ನಡೆದಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿರುವ ವಿಡಿಯೋದಲ್ಲಿ ಅವರು
ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗುವುದಿಲ್ಲವೇ? ಪ್ರಧಾನಿ ಮೋದಿ ತೀರಿಕೊಂಡರೆ ಪ್ರಧಾನಿ ಅಭ್ಯರ್ಥಿ ಇಲ್ಲವೇ? 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲವೇ? ಈಗಿನ ಯುವಕರು ಮೋದಿ ಮೋದಿ ಎಂದು ಹೇಳುತ್ತಾರೆ. ನೀವೇನು ಪ್ರಧಾನಿ ಮೋದಿಯವರನ್ನು ತೆಗೆದುಕೊಂಡು ನೆಕ್ಕುತ್ತೀರಾ? ಇಲ್ಲಿ ಯಾವುದೇ ಸಮಸ್ಯೆ ಆದರೂ ಪ್ರಧಾನಿ ಮೋದಿ ಬರಲ್ಲ, ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು. ನರೇಂದ್ರ ಮೋದಿಗೆ 3 ಸಾವಿರ ಕೋಟಿ ರೂ. ವಿಮಾನ ಇದೆ. ನರೇಂದ್ರ ಮೋದಿ 4 ಲಕ್ಷ ರೂ. ಸೂಟ್ ಹಾಕಿಕೊಳ್ಳುತ್ತಾರೆ ಎಂದಿದ್ದಾರೆ.

Previous articleಬಿಜೆಪಿಯವರನ್ನು ಕೇಳುತ್ತಾ ಕಾಲ ಹರಣ ಮಾಡುವ ಬದಲು ಸೂಕ್ತ ತನಿಖೆ ನಡೆಸಿ
Next articleಶಿವಾನಂದ ಪಾಟೀಲ ವಿರುದ್ಧ ನಾಲಿಗೆ ಹರಿಬಿಟ್ಟ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು