‘ಮಹಾ’ ಪತನ ನಿಶ್ಚಿತ!

0
8

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಬೀಳಲಿರುವುದು ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವಲ್ಲ! ಬದಲಿಗೆ ಏಕ್ ನಾಥ್ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ. ಬರೆದಿಟ್ಟುಕೊಳ್ಳಿ 1ತಿಂಗಳ ಅವಧಿಯಲ್ಲಿ ಏಕ್ ನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ! ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ಅವರ NCP ಪಕ್ಷವನ್ನು ತೊರೆದು ಹೋದ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ. ಅವರೆಲ್ಲಾ ಮರಳಿ ಬರಲಿದ್ದಾರೆ. ಕಾಂಗ್ರೆಸ್ ಒಳಗೊಂಡ ಸರ್ಕಾರ ಅಲ್ಲಿ ರಚನೆಯಾಗಲಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಯಾವುದೇ ಒಳಜಗಳವಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠವೆಂದರು 20 ಸ್ಥಾನಗಳನ್ನು ಗೆಲ್ಲುತ್ತೇವೆ.

Previous articleಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು
Next articleವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಪ್ರಕಟ