ಬಾತ್​ರೂಮಿನಲ್ಲಿ ಯುವತಿ ಮೃತದೇಹ ಪತ್ತೆ

0
30

ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಂಶಯಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತಾಯಿ‌ ಹಾಗೂ ಸಹೋದರನೊಂದಿಗೆ ವಾಸವಿದ್ದ ಈಕೆಯ ಮೃತದೇಹ ಬುಧವಾರ ಸಂಜೆ, ಕತ್ತು ಹಾಗೂ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಮನೆಯ ಬಾತ್ ರೂಮ್​​​​ನಲ್ಲಿ ಕಂಡುಬಂದಿದೆ. ಕೈ ಹಾಗೂ ಕತ್ತು ಕೊಯ್ದಿದ್ದ ಹಿನ್ನೆಲೆಯಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ. ಇದು ಆತ್ಮಹತ್ಯೆಯೇ? ಅಥವಾ ಪರಿಚಿತರಿಂದ ಕೃತ್ಯ ನಡೆದಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷಾ ವರದಿಯ ನಂತರ ನಿಖರ ಕಾರಣ ತಿಳಿದು ಬರಲಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ‘ಅಸಹಜ ಸಾವು ಪ್ರಕರಣ’ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Previous articleರಾಜ್ಯದಲ್ಲಿ ಪಂಚಾಯ್ತಿ ವ್ಯವಸ್ಥೆಗೆ `ಮಿಲಾಪಿ’ ಮೊಳೆ
Next articleಕಾನೂನಿಗೆ ಬೆಲೆ ಇಲ್ಲದಂತಾಗಿದೆ