CET ಪರೀಕ್ಷೆ ಫಲಿತಾಂಶ ಪ್ರಕಟ

0
16

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್ http:// karresults.nic.in ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳ ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ) ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ಅಧಿಕೃತವಾಗಿ ಕೆಇಎ ಫಲಿತಾಂಶ ಬಿಡುಗಡೆ ಮಾಡಿದೆ.

Previous articleನಾರಿ “ಶಕ್ತಿ”ಯ ಪಯಣ ಮತ್ತಷ್ಟು ಇತಿಹಾಸ ಸೃಷ್ಟಿಸಲಿ
Next articleರಸ್ತೆಯಲ್ಲಿ ನಮಾಜ್‌: ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು