ಬಿಆರ್‌ಎಸ್ ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

0
28

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿ ಜುಲೈ 3ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಇದೇ ಪ್ರಕರಣದ ಇತರ ಮೂವರು ಆರೋಪಿಗಳಾದ ರಾಜಕುಮಾರ್, ಅರವಿಂದ್ ಮತ್ತು ದಾಮೋದರ್ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯವು 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ಮಂಜೂರು ಮಾಡಿದೆ. ಸೋಮವಾರ ಕವಿತಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು.
ಕವಿತಾ ಅವರು ಜಾಮೀನು ಕೋರಿ ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Previous articleಕುರಾನ್ ಪಠಿಸಲು ಹೋಗುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿ ಬಂಧನ
Next articleಇಂದಿನಿಂದ ಟೋಲ್ ಶುಲ್ಕ ಶೇ. ೫ ಹೆಚ್ಚಳ