ಮೋದಿ ಸಂಪುಟದಲ್ಲಿ ರಾಜ್ಯದ ಐವರಿಗೆ ಸ್ಥಾನ

0
30

ಬೆಂಗಳೂರು: ನರೇಂದ್ರ ಮೋದಿಯವರು ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆಯುವ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ಮೂರನೇ ಅವಧಿಗೆ ಪ್ರಧಾನಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇವರೊಂದಿಗೆ ಕರ್ನಾಟಕದ ಐವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದಿಂದ ನಿರ್ಮಲಾ ಸೀತಾರಾಮನ್‌, ಪ್ರಲ್ಹಾದ್‌ ಜೋಶಿ, ಎಚ್‌.ಡಿ. ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಮತ್ತು ವಿ. ಸೋಮಣ್ಣ ಕೂಡಾ ಪ್ರಮಾಣ ವಚನ ಸ್ವೀಕರಿಸುವುದು ಖಚಿತವಾಗಿದ್ದು, ಪ್ರಲ್ಹಾದ್‌ ಜೋಶಿ, ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್‌ ಖಾತೆ ಮತ್ತು ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

Previous articleಭೋವಿ ನಿಗಮದಲ್ಲಿ ನಕಲಿ ಫಲಾನುಭವಿ ಹಗರಣ
Next articleಬಸವಣ್ಣ ಪ್ರತಿಮೆ ಸ್ಥಾಪನೆಯಲ್ಲೂ ಹಣ ದುರುಪಯೋಗ?