ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ತುಕಾರಾಂ

0
17

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಕಾಂಗ್ರೆಸ್ ಸಂಸದ ಇ ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ ತುಕಾರಾಂ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಆಯ್ಕೆಯಾದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

Previous article‘ಮಹಾರಾಜ್’ಗೆ ತಡೆಯಾಜ್ಞೆ ನೀಡಿದ ಹೈಕೋರ್ಟ್
Next articleಹತ್ಯೆಗೀಡಾದ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ನೀಡಿ