SK Home Ad
Home ತಾಜಾ ಸುದ್ದಿ ಯಡಿಯೂರಪ್ಪ ಅವರಿಗೆ ಜಾಮೀನು, ನ್ಯಾಯ ಸಮ್ಮತ

ಯಡಿಯೂರಪ್ಪ ಅವರಿಗೆ ಜಾಮೀನು, ನ್ಯಾಯ ಸಮ್ಮತ

0
195
ಆರ್‌ಎಸ್ಎಸ್

ಹಾವೇರಿ: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋರ್ಟ್ ಜಾಮೀನು ನೀಡಿರುವುದು ನ್ಯಾಯಸಮ್ಮತವಾಗಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ಧ ಷಡ್ಯಂತ್ರ ಮಾಡಿದ್ದು ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಯಡಿಯೂರಪ್ಪನವರಿಗೆ ಸನ್ನಡತೆಯಿದೆ ಕೋರ್ಟ್ ಇದನ್ನು ಒಪ್ಪಿಕೊಂಡು ಸದ್ಯ ರಿಲೀಫ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ ನಾವು ಸ್ವಾಗತ ಮಾಡುತ್ತೇವೆ.‌ ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪನವರು ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದರು.