ಜೋಶಿಗೆ ಅದ್ದೂರಿ ಸ್ವಾಗತ

0
9

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರನ್ನು ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು.
ಜೋಶಿ, ವಿಮಾನ ನಿಲ್ದಾಣದಕ್ಕೆ ಆಗಮಿಸುತ್ತಿದ್ದಂತೆ ಬೃಹತ್ ಗಾತ್ರದ ಸೇಬಿನ ಹಾರ ಹಾಕುವ ಮೂಲಕ ಸಾವಿರಾರು ಕಾರ್ಯಕರ್ತರು ಹರ್ಷದಿಂದ ಸ್ವಾಗತಿಸಿದರು. ಅಲ್ಲಿಂದ ತೆರೆದ ವಾಹನದಲ್ಲಿ ಮೆರವಣಿಗೆ, ಬೈಕ್ ರ‍್ಯಾಲಿ ಮೂಲಕ ಸಾಗಿದ ಪ್ರಹ್ಲಾದ ಜೋಶಿ ಅವರು ಗೋಕುಲ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಅಭಿಮಾನಿಗಳತ್ತ ಕೈ ಬೀಸಿ ಅಭಿನಂದನೆ ಸಲ್ಲಿಸಿದರು. ಅಲ್ಲದೆ, ವೀರ ಸಿಂಧೂರ ಲಕ್ಷö್ಮಣ, ಬಸವೇಶ್ವರ, ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಂದೆ ಸಾಗಿದರು. ದಾರಿಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಚಿ ಸಂಭ್ರಮಿಸಿದರು. ಅಲ್ಲಲ್ಲಿ ಪಲಾವು. ಮಜ್ಜಿಗೆ ಹಾಗೂ ತಂಪು ಪಾನೀಯಗಳನ್ನು ವಿತರಿಸಿದರು.
ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್. ಪಾಟೀಲ್, ಮೇಯರ್ ವೀಣಾ ಭರದ್ವಾಡ, ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದರು.

Previous articleವಿಮೆ ಹೆಸರಿನಲ್ಲಿ ಹೆಚ್ಚಿಗೆ ಹಣ ಪಡೆದ ಶೋರೂಂಗೆ ೬೦ ಸಾವಿರ ದಂಡ
Next articleಗೋ ರಕ್ಷಣೆಗೆ ತೆರಳಿದ ಸೋಮಶೇಖರ್ ಮೇಲೆ ಹಲ್ಲೆ ; ಆರೋಪಿಗಳ ಬಂಧನಕ್ಕೆ ಬೆಲ್ಲದ ಆಗ್ರಹ