ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಚಿಕಿತ್ಸೆ ಫಲಿಸದೆ ಸಾವು

0
21

ಕಲಬುರಗಿ: ೧೩ ವರ್ಷದ ಬಾಲಕಿ‌ ಮೇಲೆ ಗ್ಯಾಂಗ್ ರೇಪ್ ಮಾಡಿ‌ ಹತ್ಯೆಗಿಡಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಕಳೆದ ಎಂಟು ತಿಂಗಳಿಂದ ನಿರಂತರವಾಗಿ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದರು. ಒಂದು ತಿಂಗಳ ಗರ್ಭಿಣಿಯಾಗಿದ್ದಳು. ಮನೆಯಲ್ಲಿ ಯಾರಿಗಾದರೂ ತಿಳಿಸಿದಂತೆ ಜೀವ ಬೆದರಿಕೆವೊಡ್ಡಿದ್ದು, ಗುರುವಾರ ಖಾಸಗಿ‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಶುಕ್ರವಾರ ಮಧ್ಯಾಹ್ನ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾಳೆ ಎಂದು ಡಿಸಿಪಿ ಕನಿಕಾ ಸಿಕ್ರಿವಾಲ್ ಮಾಧ್ಯಮ ಗಳಿಗೆ ತಿಳಿಸಿದರು. ೮ ರಿಂದ ೯ ಜನರಿಂದ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಸಬ್ ಆರ್ಬನ್ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಖಂಡಿಸಿ ದಲಿತ ಸೇನೆ ಕಾರ್ಯಕರ್ತರು ಮುಖ್ಯ ರಸ್ತೆ ತಡೆದು ಮಿಂಚಿನ ಪ್ರತಿಭಟನೆ ನಡೆಸುತ್ತಿದ್ದಾರೆ.

Previous articleಸ್ವಾಮೀಜಿಗಳು ಸಿಎಂ ಆಯ್ಕೆ ಮಾಡ್ತಾರೆ ಎಂಬುದು ಗೊತ್ತಿಲ್ಲ
Next articleಲಿಂಗಾಯತರಿಗೆ ಮುಖ್ಯಮಂತ್ರಿ ಮಾಡಿ