ಶಾಲೆಯ ಹೊಸ ಕೊಠಡಿಯ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿಗೆ ಗಂಭೀರ ಗಾಯ

0
8

ರಾಯಚೂರು: ಶಾಲಾ ಕೊಠಡಿಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿ ತಲೆಗೆ ಗಾಯವಾದ ಘಟನೆ ನಡೆದಿದೆ.
ಜಿಲ್ಲೆ ಲಿಂಗಸುಗೂರು ತಾಲೂಕಿನ ಅನ್ವರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಗಂಗಪ್ಪ ತಲೆಗೆ ಗಂಭೀರ ಪೆಟ್ಟು ಆಗಿದೆ, ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದ್ದು ವಿದ್ಯಾರ್ಥಿ ತಲೆಗೆ 5 ಹೊಲಿಗೆ ಹಾಕಲಾಗಿದೆ, ಕೇವಲ ಎರಡು ವರ್ಷಗಳ ಹಿಂದೆ ಅಷ್ಟೇ ನಿರ್ಮಾಣಗೊಂಡ ನೂತನ ಶಾಲಾ ಕೊಠಡಿ ಕುಸಿತಕ್ಕೆ ಖಂಡನೆ ವ್ಯಕ್ತವಾಗಿದ್ದು, ನೂತನವಾಗಿ ನಿರ್ಮಾಣಗೊಂಡ ಕಟ್ಟಡ ಸಂಪೂರ್ಣವಾಗಿ ಕಳಪೆಯಾಗಿದ್ದು, ಈ ಘಟನೆಯ ಹೊಣೆಯನ್ನು ಕಟ್ಟಡ ನಿರ್ಮಾಣದ ಗುತ್ತಿಗೆದಾರರು ಹಾಗೂ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯವರು ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇವರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದು, ಗಾಯಗೊಂಡ ವಿದ್ಯಾರ್ಥಿಯ ಸಂಪೂರ್ಣ ಆಸ್ಪತ್ರೆ ವೆಚ್ಚವನ್ನು ಸಂಬಂಧಪಟ್ಟ ಇಲಾಖೆ ಹಾಗೂ ತಾಲೂಕಾ ಆಡಳಿತ ಕೊಡಬೇಕು ಎಂದಿದ್ದಾರೆ. ನಿರ್ಲಕ್ಷ್ಯ ವಹಿಸಿದರೆ ಬಿ ಇ ಒ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಎಸ್ಎಫ್ಐ ಎಚ್ಚರಿಕೆ ನೀಡಿದೆ.

Previous articleರಾಹುಲ್ ಗಾಂಧಿ ಕೆನ್ನೆಗೆ ಬಾರಿಸಬೇಕಿತ್ತು
Next articleಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್