ಬೆಂಗಳೂರು : ಕಲ್ಯಾಣ ಕರ್ನಾಟಕದವರಿಗೆ BMTC, KKRTC, KUWSDB ಯ ವಿವಿಧ ಹುದ್ದೆಗಳಿಗೆ ಜುಲೈ 13 ಹಾಗೂ 14ರಂದು ಪರೀಕ್ಷೆ ನಡೆಯಲಿದ್ದು ಅಕ್ರಮಕ್ಕೆ ಅವಕಾಶ ಇಲ್ಲದಂತೆ ನಿಗಾ ವಹಿಸಲು ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಬೆಂಗಳೂರು, ಧಾರವಾಡ ಸೇರಿದಂತೆ ಒಟ್ಟು 22 ಕೇಂದ್ರಗಳ, 377 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಕ್ಯಾಮರಾ ಅಳವಡಿಸಿದ್ದು, ವೆಬ್ ಕ್ಯಾಸ್ಟಿಂಗ್ ಮೂಲಕ ಅಲ್ಲಿನ ಎಲ್ಲ ಬೆಳವಣಿಗೆಗಳನ್ನು ವೀಕ್ಷಿಸುವ ವ್ಯವಸ್ಥೆಯನ್ನು ಇದೇ ಮೊದಲ ಬಾರಿಗೆ ಮಾಡಲಾಗಿದೆ .