ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ (ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್ (ಐಎಎಸ್) ಇಂದು ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ರೋಷನ್ ( ಐಎಎಸ್) ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಹೊಂದಿದ್ದರು. ಈ ಹಿನ್ನೆಲೆ ತೆರವಾಗಿದ್ದ ಎಂ.ಡಿ ಹುದ್ದೆಗೆ ವೈಶಾಲಿ ಎಂ.ಎಲ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.