ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯ ಬಸ್ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಕೆಲಸದಿಂದ ತೆಗೆಯಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ತವ್ಯದ ವೇಳೆ ರೀಲ್ಸ್ ಮಾಡಿದರೆ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು. ರೀಲ್ಸ್ ಮಾಡುವವರು ಕೆಲಸದಲ್ಲಿ ಇರಲು ಲಾಯಕ್ ಇಲ್ಲ ಎಂದರು.