ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ

0
9

ಬಾಗಲಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಬಸನಗೌಡ ಯತ್ನಾಳ, ಪ್ರತಾಪ್ ಸಿಂಹ, ಸಿ.ಟಿ. ರವಿ ಅವರ ಮಾತುಗಳು ನೂರಕ್ಕೆ ನೂರು ಸತ್ಯ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ, ಶಿಕಾರಿಪುರದಲ್ಲಿ ಈಗಿನ ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಅವರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಮೂಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಬೇಕು, ಕೇವಲ ಪರಸ್ಪರ ಆರೋಪ ಆಪಾದನೆಗಳನ್ನು ಮಾಡಿದರೆ. ತಪ್ಪಿಸ್ತಸ್ಥರು ಯಾರು ಎಂಬುದು ಹೊರಗೆ ಬರುವುದಿಲ್ಲ. ಕೇವಲ ಟೀಕೆಗಳನ್ನು ಮಾಡುತ್ತಿದ್ದಾರೆ. ಸಿಬಿಐಗೆ ನೀಡಲು ಯಾರು ಸಿದ್ದವಿಲ್ಲ. ಒಬ್ಬರನ್ನೊಬ್ಬರು ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ ಅವರು ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳು, ಅವ್ಯವಹಾರಗಳನ್ನು ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Previous articleನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ..
Next articleಯುವಕನ ಮೈಮೇಲೆ ಬಿದ್ದ ವಿದ್ಯುತ್ ಕಂಬ…