ಬೆಂಗಳೂರು: ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಬೆಂಗಳೂರಿನಲ್ಲಿಂದು ಚಾಲನೆ ನೀಡಲಾಯಿತು.
ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (LKG, UKG) ಪೂರ್ವ ಪ್ರಾಥಮಿಕ ತರಗತಿಗಳಿಗೆ ಬೆಂಗಳೂರಿನಲ್ಲಿಂದು ಚಾಲನೆ ನೀಡಲಾಯಿತು. ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಪೂರ್ವ ಪ್ರಾಥಮಿಕ ಶಾಲೆಗಳಿಗೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ನಮ್ಮ ಪುಟಾಣಿಗಳು ಅಂಗನವಾಡಿ ಕೇಂದ್ರಗಳಲ್ಲೆ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಯಲಿದ್ದಾರೆ. ಈ ವೇಳೆ ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಕಲಾಂಗ ಇಲಾಖೆಯ ಆಯುಕ್ತರಾದ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್, ಸೇರಿದಂತೆ ಇಲಾಖೆಯ ಅಧಿಕಾರಿಗಳು, ಕಾವೇರಿಪುರ ವಾರ್ಡ್ ನ ಪ್ರಮುಖರು ಉಪಸ್ಥಿತರಿದ್ದರು ಎಂದಿದ್ದಾರೆ.