7ನೇ ವೇತನ ಆಯೋಗ: ಅಧಿಕೃತ ಆದೇಶ

0
20

ಬೆಂಗಳೂರು: 7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಯಿಂದ ರಾಜ್ಯ ಸರ್ಕಾರಿ ನೌಕರರಿಗೆ ಸಿಗುವ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದೆ. ವರದಿಯಲ್ಲಿನ ಶಿಫಾರಸುಗಳನ್ನು ಸರ್ಕಾರವು ಪರಿಗಣಿಸಿದ್ದು, ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆದೇಶ ಹೊರಡಿಸಿದ್ದಾರೆ.

Previous articleIT ಉದ್ಯೋಗ ಸಮಯ 14 ಗಂಟೆಗೆ ವಿಸ್ತರಣೆ: ಅಭಿಪ್ರಾಯ ಪಡೆದು, ಚರ್ಚಿಸಿ ಅಂತಿಮ ತೀರ್ಮಾನ
Next articleಮರ ಬಿದ್ದು ಇಬ್ಬರ ಸಾವು